ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ನಾಡಿಗೆ ಬಗೆವ ದ್ರೋಹ: ಸಿದ್ದರಾಮಯ್ಯ
ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ನಾಡಿಗೆ ಬಗೆವ ದ್ರೋಹ: ಸಿದ್ದರಾಮಯ್ಯ
‘ಟಿಪ್ಪು ಸುಲ್ತಾನ್ ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ’
ಟಿಪ್ಪು ಜಯಂತಿ ಆಚರಣೆ ಬಗ್ಗೆ ಬಿಜೆಪಿ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ.
ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ
ದೇಶದ ಸ್ವಾತಂತ್ರ್ಯಕ್ಕಾಗಿ ತನ್ನನ್ನು ದೇಶಕ್ಕೆ ಅರ್ಪಿಸಿದ ಟಿಪ್ಪು ಸುಲ್ತಾನರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ 10, ಟಿಪ್ಪು ಜಯಂತಿಯ ಬಗ್ಗೆ ತನ್ನ ಟ್ವಿಟ್ಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ‘ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ’ ಎಂದು ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ವಿವಾದದಂತೆ ಮಾಡಿರುವ ಬಿಜೆಪಿ ಮತ್ತು ಅದರ ನಾಯಕರಿಗೆ ಸ್ಪಷ್ಟಪಡಿಸಿದ್ದಾರೆ.
ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹವೆಂದೂ ಹೇಳಿದ್ದಾರೆ.
Comments
Post a Comment